ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾವೇರಿ ಜಿಲ್ಲೆ ಇದರ ನೇತೃತ್ವದಲ್ಲಿ ಹಾವೇರಿಯ ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿಶ್ರುತ್ ರಾಜ್ ಟಿ.ಬಿ. ಹಾಗೂ ಪೂರ್ವಜ್ ಗೌಡ ವಿ. ರಿದಮಿಕ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನಿಗಳಾಗಿ ಹೊರಹೊಮ್ಮಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ – ಜ್ಞಾನಸುಧಾದ ಇಬ್ಬರಿಗೆ ತೃತೀಯ ಸ್ಥಾನ


































