ಸಾಂಸ್ಕೃತಿಕ ಸ್ಪರ್ಧೆ – ಶ್ರೀ ಭುವನೇಂದ್ರ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆ-2025ರಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನ್ವಿತಾ ರಾಜೇಶ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ, ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.











































error: Content is protected !!
Scroll to Top