ಕಾರ್ಕಳ : ರಸ್ತೆ ದಾಟಲು ನಿಂತಿದ್ದ ಯುವತಿಗೆ ಬಸ್ ಡಿಕ್ಕಿ ಹೊಡೆದ ಘಟನೆ ನ. 24ರಂದು ಸಾಣೂರು ಗ್ರಾಮದ ಮುರತ್ತಂಗಡಿಯಲ್ಲಿ ಸಂಭವಿಸಿದೆ. ಇರ್ವತ್ತೂರು ಗ್ರಾಮದ ನಂದಾ ಅತಿಕಾರಿ ಸಂಜೆ ಮುರತ್ತಂಗಡಿ ಜಂಕ್ಷನ್ ಬಳಿ ರಸ್ತೆ ದಾಟಲು ರಸ್ತೆ ಬದಿ ನಿಂತುಕೊಂಡಿದ್ದಾಗ ಮೂಡಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ನಂದಾ ಅವರು ಗಾಯಗೊಂಡಿರುತ್ತಾರೆ. ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ರಸ್ತೆ ದಾಟಲು ನಿಂತಿದ್ದ ಯುವತಿಗೆ ಬಸ್ ಡಿಕ್ಕಿ





































