ಹೆಬ್ರಿ : ಅಲಯನ್ಸ್ 275 S ವ್ಯಾಪ್ತಿಯಲ್ಲಿ ನೂತನವಾಗಿ ಆರಂಭಗೊಂಡಿರುವ ಲೇಡಿ ಅಲಯನ್ಸ್ ಕ್ಲಬ್ ಹೆಬ್ರಿ ಇದರ ಅಧ್ಯಕ್ಷರಾಗಿ ಸುನೀತಾ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಗುರುವಾರ ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯದರ್ಶಿಯಾಗಿ ರಮ್ಯಕಾಂತಿ ಹಾಗೂ ಕೋಶಾಧಿಕಾರಿಯಾಗಿ ಅಮೃತ ಆಯ್ಕೆಯಾಗಿರುತ್ತಾರೆ.
ಅಲಯನ್ಸ್ ಜಿಲ್ಲೆ 275S ರ ಪ್ರಥಮ ಉಪಜಿಲ್ಲಾ ಗವರ್ನರ್ ಸುನಿಲ್ ಕುಮಾರ್ ಶೆಟ್ಟಿ, ದ್ವಿತೀಯ ಉಪ ಜಿಲ್ಲಾ ಗವರ್ನರ್ ಸುಧಾಕರ್ ಹೆಗ್ಡೆ ಹಾಗೂ ಜಿಲ್ಲಾ ಸಂಪುಟ ಕಾರ್ಯದರ್ಶಿ ಜಗದೀಶ್ ಹೊಳ್ಳ ಇವರ ಮಾರ್ಗದರ್ಶನದಲ್ಲಿ ಕ್ಲಬ್ ಪ್ರಾರಂಭಗೊಂಡಿರುತ್ತದೆ. ಸಭೆಯಲ್ಲಿ ಅಲಯನ್ಸ್ ಕ್ಲಬ್ ಹೆಬ್ರಿ ಇದರ ಅಧ್ಯಕ್ಷ ಕೆ .ರಾಮಚಂದ್ರ ಭಟ್ ಮತ್ತು ಕಾರ್ಯದರ್ಶಿ ಬಾಲಚಂದ್ರ ಮುದ್ರಾಡಿ ಉಪಸ್ಥಿತರಿದ್ದರು. ನೂತನ ಅಧ್ಯಕ್ಷೆ ಸುನೀತಾ ಹೆಬ್ಬಾರ್ ಸ್ವಾಗತಿಸಿ, ಕಾರ್ಯದರ್ಶಿ ರಮ್ಯಕಾಂತಿ ವಂದಿಸಿದರು .
ಲೇಡಿ ಅಲಯನ್ಸ್ ಕ್ಲಬ್ ಹೆಬ್ರಿ ಅಧ್ಯಕ್ಷರಾಗಿ ಸುನೀತಾ ಹೆಬ್ಬಾರ್



















