ಕಾರ್ಕಳ : ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 8 ನೇ ವರ್ಷದ ವಾರ್ಷಿಕೋತ್ಸವ ಮತ್ತು ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿಯಲ್ಲಿ ಕ್ಷೇತ್ರದ ಆಡಳಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಯೋಗೀಶ್ ಮಲ್ಯ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಜನಾರ್ದನ ಆಚಾರ್ಯ, ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಹರೀಶ್ ಹೆಗ್ಡೆ ಕಡ್ತಲ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿಯ ಸಂಸ್ಥಾಪಕ ದೇವೇಂದ್ರ ಕಾಮತ್ ಎಳ್ಳಾರೆ, ಅಧ್ಯಕ್ಷೆ ಶಾಂತಿ ಪ್ರಭು, ಪ್ರಕಾಶ್, ಸೀತಾರಾಮ್ ಪ್ರಭು, ಪ್ರಭಾಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಎಳ್ಳಾರೆ ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ









