ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ – ಅದೃಷ್ಟವಶಾತ್‌ ಪ್ರಯಾಣಿಕರು ಅಪಾಯದಿಂದ ಪಾರು

ಕಾರ್ಕಳ : ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಡಿ. 3ರಂದು ಸಂಜೆ ತೆಳ್ಳಾರು ರಸ್ತೆ ರಾಘವೇಂದ್ರ ಮಠದ ಸಮೀಪ ಸಂಭವಿಸಿದೆ. ಆಟೋ ಚಾಲಕ ತೆಳ್ಳಾರಿನ ಉದಯ ಅವರು ತನ್ನ ಕುಟುಂಬದ ನಾಲ್ವರನ್ನು ಕಾರ್ಕಳದಿಂದ ತೆಳ್ಳಾರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್‌ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದಿಂದಾಗಿ ವಿದ್ಯುತ್‌ ಕಂಬಗಳು ಧರೆಗುಳಿದಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ, ಸ್ಥಳೀಯರು ಮರ ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ.









































































































error: Content is protected !!
Scroll to Top