ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ವಿಧೇಯಕಕ್ಕೆ ಅನುಮೋದನೆ

ಬೆಂಗಳೂರು : ದ್ವೇಷ ಭಾಷಣ, ದ್ವೇಷ ಹರಡುವಿಕೆ ಅಥವಾ ಹಿಂಸೆಗೆ ಪ್ರಚೋದಿಸುವವರಿಗೆ ಒಂದು ಲಕ್ಷ ರೂ. ವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ವಿಧೇಯಕ-2025’ ಸೇರಿ ಎಂಟು ವಿಧೇಯಕಗಳಿಗೆ ಗುರುವಾರದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ವಿಧೇಯಕ-2025 ಕಳೆದ ಜೂನ್ ತಿಂಗಳಲ್ಲೇ ಚರ್ಚೆಗೆ ಬಂದಿದ್ದರೂ, ಕೆಲ ಗೊಂದಲಗಳಿಂದಾಗಿ ಅದನ್ನು ತಡೆಹಿಡಿಯಲಾಗಿತ್ತು. ಗುರುವಾರದ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಿರುವ ವಿಧೇಯಕದಲ್ಲಿ ಧರ್ಮ, ಜಾತಿ, ಜನಾಂಗ, ಭಾಷೆ, ಲಿಂಗ, ಜನ್ಮಸ್ಥಳ ಅಥವಾ ಲೈಂಗಿಕ ದೃಷ್ಟಿಕೋನಗಳ ಆಧಾರದ ಮೇಲೆ ದ್ವೇಷ ಹರಡುವವರಿಗೆ ಅಥವಾ ಹಿಂಸೆಗೆ ಪ್ರಚೋದನೆ ನೀಡುವವರಿಗೆ ಮೊದಲ ಬಾರಿಯ ಉಲ್ಲಂಘನೆಗೆ 1 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50,000 ರು.ವರೆಗೆ ದಂಡ ವಿಧಿಸಲು ಪ್ರಸ್ತಾಪಿಸಲಾಗಿದೆ. ಜತೆಗೆ ಪುನರಾವರ್ತಿತ ಉಲ್ಲಂಘನೆಗೆ 1 ಲಕ್ಷ ರು.ವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ದ್ವೇಷ ಹರಡುವಿಕೆ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಹೊಣೆಗಾರಿಕೆ ಅತ್ಯಂತ ಮಹತ್ವದ ಅಂಶ. ದ್ವೇಷವನ್ನು ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದರೂ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ್ ಅವರು, ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ, ಬಯಲುಸೀಮೆ ತಿದ್ದುಪಡಿ ವಿಧೇಯಕ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಧಾರ್ಮಿಕ ದತ್ತಿ ವಿಧೇಯಕ, ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕ, ಸಾಮಾಜಿಕ‌ಬಹಿಷ್ಕಾರ ನಿಷೇಧ ವಿಧೇಯಕ, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದರು.

error: Content is protected !!
Scroll to Top