ಕಾರ್ಕಳ : ಕಾರ್ಕಳ ಐಬಿ ಫೀಡರ್ ಮತ್ತು ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಟೌನ್ ಫೀಡರ್ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.7ರಂದು ನಗರ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಿಂದ ಅನಂತಶಯನ ದೇವಸ್ಥಾನದವರೆಗೆ, ಮಾರ್ಕೆಟ್ ರೋಡ್, ಮೂರುಮಾರ್ಗ -ಮಂಗಳೂರು ರಸ್ತೆ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಡಿ. 7 : ಕಾರ್ಕಳ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ






























































