ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಪೊಲೀಸ್ ಇಲಾಖೆಗೆ ಬೊಲೇರೋ ಹಸ್ತಾಂತರ

ಉಡುಪಿ : ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸ ಬೊಲೇರೋ ಜೀಪ್‌ನ್ನು ಕೊಡುಗೆಯಾಗಿ ನೀಡಿದೆ. ಡಿ. 6ರಂದು ಉಡುಪಿ ಎಸ್ಪಿ ಕಚೇರಿಯಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ನೂತನ ವಾಹನದ ಕೀಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಪೊಲೀಸ್ ಇಲಾಖೆ ಬಹಳಷ್ಟು ಸವಾಲುಗಳನ್ನು ಎದುರಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ. ನಮ್ಮೆಲ್ಲರ ಸುರಕ್ಷತೆಯನ್ನು ನೋಡಿಕೊಳ್ಳುವುದು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸ್ ಇಲಾಖೆಯ ಬಹುದೊಡ್ಡ ಜವಾಬ್ದಾರಿ. ನಾವು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮನವಿಗೆ ಸ್ಪಂದಿಸಿ ಎರಡು ವಾಹನವನ್ನು ನೀಡಿದ್ದೇವೆ. ಅದೇ ರೀತಿ ಉಡುಪಿ ಎಸ್ಪಿಯವರ ಮನವಿಗೆ ಇದೀಗ ಬೊಲೇರೋ ನೀಡಿದ್ದೇವೆ ಎಂದರು.
ಡಾ. ರಾಜೇಂದ್ರ ಕುಮಾರ್ ಅವರನ್ನು ಇಲಾಖೆಯ ವತಿಯಿಂದ ಸನ್ಮಾನಿಸಿತು. ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಡಿವೈಎಸ್ಪಿ ಡಿ.ಟಿ. ಪ್ರಭು, ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.





























































































































error: Content is protected !!
Scroll to Top