ಡಿ. 13 : ಯರ್ಲಪಾಡಿ ಸರಕಾರಿ ಸಂಯುಕ್ತ ಪ್ರೌಢಶಾಲಾ ವಾರ್ಷಿಕೋತ್ಸವ

ಕಾರ್ಕಳ : ಯರ್ಲಪಾಡಿ ಸರಕಾರಿ ಸಂಯುಕ್ತ ಪ್ರೌಢಶಾಲಾ ವಾರ್ಷಿಕೋತ್ಸವ ಡಿ.13ರಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಶಿಕ್ಷಣ ತಜ್ಞ ಹಾಗೂ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮುಖ್ಯಸ್ಥ ಅನಂತಪಟ್ಟಾಭಿ ರಾವ್‌ ಧ್ವಜಾರೋಹಣ ನೆರವೇರಿಸಲಿದ್ದು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ನರಂಗ ಕುಲಾಲ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಶಾಲಾ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಪ್ರೌಢಶಾಲಾ ವಿದ್ಯಾರ್ಥಿಗಳಿಂದ ರಾಮ ಧಾನ್ಯ ಚರಿತೆ ಮತ್ತು ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಬಳಿಕ ಅಂಗನವಾಡಿ ಪುಟಾಣಿಗಳಿಂದ ನೃತ್ಯ ವೈವಿಧ್ಯ, ಪ್ರಾಥಮಿಕ, ಪ್ರೌಢಶಾಲಾ ಹಾಗು ಹಳೆ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ನಡೆಯಲಿದೆ.

ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ವಿ. ಸುನಿಲ್‌ ಕಾರ್ಯಕ್ರಮ ಉದ್ಘಾಟಿಸಲಿರುವರು. ಯರ್ಲಪಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಹೆಗ್ಡೆ ಸಭಾಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜನಪ್ರತಿನಿಧಿಗಳು, ಉದ್ಯಮಿಗಳು, ಇಲಾಖಾ ಅಧಿಕಾರಿಗಳು ಹಾಗೂ ಗಣ್ಯರು ಭಾಗಿಯಾಗಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಹಳೆ ವಿದ್ಯಾರ್ಥಿಗಳಿಂದ ತುಳು ಹಾಸ್ಯಮಯ ನಾಟಕ ಕಥೆ ಏರ್‌ ಬರೆಪೆರ್‌ ಪ್ರದರ್ಶನಗೊಳ್ಳಲಿದೆ.





























































































error: Content is protected !!
Scroll to Top