ರಾಜ್ಯಾದ್ಯಂತ ಕಡ್ಡಾಯವಾಗಿ ಕನ್ನಡ ನಾಮಫಲಕ ಒಂದು ತಿಂಗಳೊಳಗೆ ಅಳವಡಿಕೆ : ಶಿವರಾಜ್ ತಂಗಡಗಿ

ಬೆಳಗಾವಿ : ಕರ್ನಾಟಕದಾದ್ಯಂತ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಟ್ರಸ್ಟ್ ನಡೆಸುವ ಸಂಸ್ಥೆಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಒಂದು ತಿಂಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸುವ ಸಂಬಂಧ ನಿಯಮಗಳನ್ನು ಈಗಾಗಲೇ ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆಗೆ ಅಂತಿಮ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು. ಮುಂದಿನ ಕೆಲವು ವಾರಗಳಲ್ಲಿ ಕಾರ್ಯವಿಧಾನ ಪೂರ್ಣಗೊಂಡ ನಂತರ, ರಾಜ್ಯಾದ್ಯಂತ ಆದೇಶ ಹೊರಡಿಸಲಾಗುವುದು. ಕನ್ನಡ ನಾಮಫಲಕ ಅಭಿಯಾನವು ಅನೇಕ ಜಿಲ್ಲೆಗಳಲ್ಲಿ ಹೆಚ್ಚು ಯಶಸ್ವಿಯಾಗಿದೆ. ಹನ್ನೊಂದು ಜಿಲ್ಲೆಗಳಲ್ಲಿ ಶೇ. 100 ಅನುಷ್ಠಾನ ಸಾಧಿಸಿದ್ದರೆ, ಉಳಿದವು ಶೇ. 80 ಮತ್ತು 90 ರಷ್ಟು ಅನುಷ್ಠಾನಗೊಂಡಿವೆ. ಎಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣ ಅಳವಡಿಕೆ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದರು.



































































































error: Content is protected !!
Scroll to Top