ಡಿ. 14 : ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಕಾರ್ಕಳ ಗ್ರಾಮ ಪಂಚಾಯತ್, ಕುಕ್ಕುಂದೂರು, ಕಾರ್ಕಳ ರೋಟರಿ ಕ್ಲಬ್, ಕಾರ್ಕಳ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ. 14 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.30ರ ವರೆಗೆ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವು ನಡೆಯಲಿರುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಕಳ ರೋಟರಿ ಕ್ಲಬ್‌ ಅಧ್ಯಕ್ಷ ನವೀನಚಂದ್ರ ಶೆಟ್ಟಿ ನೆರವೇರಿಸಲಿದ್ದು, ಕುಕ್ಕುಂದೂರು ಗ್ರಾಮ ಪಂಚಾಯತ್‌ ಅಧ್ಯಕ್ಷರು ಉಷಾ ಕೆ. ಅಧ್ಯಕ್ಷತೆಯನ್ನು ವಹಿಸಲಿರುವರು. ತಾಲೂಕು ಆರೋಗ್ಯಾಧಿಕಾರಿ ಡಾ। ಸಂದೀಪ್ ಕುಡ್ವ, ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶ್ರೀವಿದ್ಯಾ ಉಪಸ್ಥಿತರಿರುವರು.

ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಲಾಗುವುದು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ, ಗೊತ್ತುಪಡಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ತಮ್ಮದೇ ಆದ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿ, ಮರುದಿನ ವಾಪಾಸು ಕರೆದು ತಂದು ಬಿಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಡುಪಿ ಪ್ರಸಾದ್‌ ನೇತ್ರಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹರ್ಷ ಇವರನ್ನು ದೂ: 9844511211 ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



































































































error: Content is protected !!
Scroll to Top