ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಜಿ.ಪಂ. ಸಿಇಒ ಸೂಚನೆ

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.
ಅವರು ಡಿ. 16ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಈವರೆಗೆ 5,661 ಅರ್ಜಿಗಳು ಸ್ವೀಕೃತವಾಗಿದ್ದು, 1,337 ಅರ್ಜಿಗಳು ತಿರಸ್ಕೃತಗೊಂಡಿದೆ. 3,937 ಫಲಾನುಭವಿಗಳಿಗೆ 35.29 ಕೋಟಿ ರೂ. ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂದ ಅವರು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 129 ನಿಗದಿತ ಗುರಿಗೆ, 91 ಜನ ಫಲಾನುಭವಿಗಳಿಗೆ 10.06 ಕೋಟಿ ರೂ. ಆರ್ಥಿಕ ನೆರವು ವಿತರಿಸಲಾಗಿದೆ. ಯಾವುದೇ ಯೋಜನೆಗಳಡಿ ಅರ್ಜಿ ಸಲ್ಲಿಕೆಯಾದಾಗ ಅರ್ಜಿಗಳನ್ನು ಬಾಕಿ ಉಳಿಸದೇ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು ಎಂದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 15,514.16 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದೆ. ಈವರೆಗೆ 8,941.11 ಗುರಿ ಸಾಧಿಸಿ, ಶೇ. 57.63 ಸಾಧನೆ ಮಾಡಲಾಗಿದೆ ಎಂದ ಅವರು, ಕೃಷಿ ವಲಯಕ್ಕೆ 4,230 ನಿಗದಿತ ಗುರಿಗೆ 2,274 ಗುರಿ ಸಾಧಿಸಿ ಶೇ. 53.76, ಎಂ.ಎಸ್.ಎಂ.ಇ ವಲಯಕ್ಕೆ 3,713 ಗುರಿ ನಿಗದಿಪಡಿಸಲಾಗಿದ್ದು, 2,426 ಗುರಿ ಸಾಧಿಸಿ ಶೇ. 65.35 ರಷ್ಟು, ಶಿಕ್ಷಣ ವಲಯಕ್ಕೆ 187 ನಿಗದಿತ ಗುರಿಗೆ 116 ಗುರಿ ಸಾಧಿಸಿ ಶೇ. 62.12 ರಷ್ಟು, ವಸತಿ ಕ್ಷೇತ್ರಗಳಿಗೆ 510 ನಿಗದಿತ ಗುರಿಗೆ 111 ಗುರಿ ಸಾಧಿಸಿ ಶೇ. 21.85 ರಷ್ಟು, ಇತರೆ ಕ್ಷೇತ್ರಗಳಿಗೆ 399 ನಿಗದಿತ ಗುರಿಗೆ, 194 ಗುರಿ ಸಾಧಿಸಿ ಶೇ. 48.46 ಹಾಗೂ ಆದ್ಯತೇತರ ವಲಯಗಳಿಗೆ 6,474 ನಿಗದಿತ ಗುರಿಗೆ, 3,819 ಗುರಿ ಸಾಧಿಸಿ ಶೇ. 58.99 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಕಾರ್ಯಪ್ರವೃತ್ತರಾಗಿ
ಬೆಂಗಳೂರು ಆರ್.ಬಿ.ಐ ಎಫ್.ಐ.ಡಿ.ಡಿ ಲೀಡ್ ಡಿಸ್ಟ್ರಿಕ್ಟ್ ಆಫೀಸರ್ ನಿಶಾ ಠಾಕೂರ್ ಮಾತನಾಡಿ, ಆರ್.ಬಿ.ಐ‌. ನಿಯಮಾನುಸಾರ ಜಿಲ್ಲೆಗಳ ಸಿ.ಡಿ ಅನುಪಾತವು ಶೇ. 50 ಕ್ಕಿಂತ ಕಡಿಮೆ ಇರಬಾರದು. ಇದನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳೂ ಕಾರ್ಯಪ್ರವೃತ್ತರಾಗಬೇಕು ಎಂದರು.

ಕೆನರಾ ಬ್ಯಾಂಕ್ ರೀಜನಲ್ ಮ್ಯಾನೇಜರ್ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ. 47.66 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.48.62 ರಷ್ಟಾಗಿ ಶೇ. 0.96 ರಷ್ಟು ಏರಿಕೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ವಿಷಾದನೀಯವಾಗಿದ್ದು, ಮುಂದಿನ ದಿನಗಳಲ್ಲಿ ಸಿ.ಡಿ ಅನುಪಾತ ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳು ಕಾರ್ಯಪ್ರವೃತ್ತರಾಗಬೇಕು ಎಂದರು. ಸಭೆಯಲ್ಲಿ ನಬಾರ್ಡ್‌ ಡಿ.ಡಿ. ಎಂ. ಸಂಗೀತಾ ಕಾರ್ಥಾ, ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್‌ಗಳ ಮುಖ್ಯಸ್ಥರು ಉಪಸ್ಥಿತರಿದ್ದರು.









































































































error: Content is protected !!
Scroll to Top