ಡಿ. 27 : ಪುತ್ತಿಗೆ ಪರ್ಯಾಯ ಸಮಾರೋಪದಲ್ಲಿ ಸಿಎಂ ಯೋಗಿ ಭಾಗಿ ?

ಉಡುಪಿ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಡಿ. 27ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಪುತ್ತಿಗೆ ಮಠದ ಶ್ರೀಪಾದರ ಪರ್ಯಾಯದ ಸಮಾರೋಪ ಕಾರ್ಯಕ್ರಮದಲ್ಲಿ ಕೃಷ್ಣದೇವರಿಗೆ ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಯೋಗಿ ಭಾಗಿಯಾಗುವ ಸಾಧ್ಯತೆಯಿದೆ.

ಡಿ. 16ರಂದು ಲಕ್ನೋದಲ್ಲಿರುವ ಅವರ ನಿವಾಸಕ್ಕೆ ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಹಾಗೂ ಹಿರಿಯ ಪತ್ರಕರ್ತ ರವೀಂದ್ರ ಜೋಶಿಯವರು ತೆರಳಿ ಪುತ್ತಿಗೆ ಮಠದ ವತಿಯಿಂದ ಆಮಂತ್ರಿಸಿ, ಕಾರ್ಯಕ್ರಮದ ವಿವರಗಳನ್ನು ನೀಡಿರುತ್ತಾರೆ. ಈ ವೇಳೆ ಯೋಗಿ ಅವರು ಶ್ರೀಕೃಷ್ಣಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾದ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಸನ್ನಾಚಾರ್ಯ ತಿಳಿಸಿದ್ದಾರೆ









































































































error: Content is protected !!
Scroll to Top