ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರು ನೋಟಿಸ್​​ ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್ ಇದೀಗ ಮತ್ತೆ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ. ಆದರೆ, ತಿಮರೋಡಿ ಈ ಸಂದರ್ಭ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.









































































































error: Content is protected !!
Scroll to Top