ಡಿ. 22 : ಅಡಿಕೆ ಬೆಳೆ ಎಲೆ ಚುಕ್ಕೆ ರೋಗ ಹಾಗೂ ಅಡಿಕೆ ಬೆಳೆ ಸಮಗ್ರ ನಿರ್ವಹಣೆ ಕುರಿತು ವಿಚಾರ ಸಂಕಿರಣ

ಕಾರ್ಕಳ : ತೋಟಗಾರಿಕೆ ಇಲಾಖೆ ಕಾರ್ಕಳ, ಮಾಳ- ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಅಡಿಕೆ ಬೆಳೆ ಎಲೆ ಚುಕ್ಕೆ ರೋಗ ಹಾಗೂ ಅಡಿಕೆ ಬೆಳೆ ಸಮಗ್ರ ನಿರ್ವಹಣೆ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ಡಿ. 22ರಂದು ಬಜಗೋಳಿಯ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.

ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಡಾರು ಗ್ರಾ. ಪಂ. ಅಧ್ಯಕ್ಷೆ ಶ್ರುತಿ ಡಿ. ಅತಿಕಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್‌ ಹೆಗ್ಡೆ, ಮಾಳ- ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ, ಪಂಚಾಯತ್‌ ಉಪಾಧ್ಯಕ್ಷ ಅರುಣ್‌ ಕುಮಾರ್‌ ಶೆಟ್ಟಿ, ಮಾಳ- ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ನಾಗೇಶ ಭಂಡಾರಿ, ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಭಾಸ್ಕರ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್‌ ತೋಟಗಾರಿಕೆ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಭಾಗವಹಿಸಲಿದ್ದಾರೆ.

ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾಸರಗೋಡು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ಸಸ್ಯರೋಗ ತಜ್ಞ ಡಾ. ವಿನಾಯಕ ಹೆಗಡೆ, ಬ್ರಹ್ಮಾವರ ವಲಯ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರದ ತೋಟಗಾರಿಕೆ ತಜ್ಞ ಡಾ. ಚೈತನ್ಯ, ಶೃಂಗೇರಿ ವಲಯ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರದ ತೋಟಗಾರಿಕೆ ತಜ್ಞ ಡಾ. ಸಂಜೀವ ಜಕಾತಿಮಠ ಭಾಗವಹಿಸಲಿದ್ದಾರೆ. ರೈತರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಬಿ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.









































































































error: Content is protected !!
Scroll to Top