ಕಾರ್ಕಳ : ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರ ಪ್ರಾಯೋಜಕತ್ವದಲ್ಲಿ ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ಕೊಡಮಾಡುವ ಕರುನಾಡ ಸಿರಿ -೨೦೨೫ ಪ್ರಶಸ್ತಿಗೆ ಶ್ರೀ ಬಿ. ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರೌಢಶಾಲೆ ದುರ್ಗ ತೆಳ್ಳಾರು ಆಯ್ಕೆಯಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
ತೆಳ್ಳಾರು ಪ್ರೌಢಶಾಲೆಗೆ ಕರುನಾಡ ಸಿರಿ ಪ್ರಶಸ್ತಿ



















