ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ – 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ರಾಜ್ಯದೆಲ್ಲೆಡೆ ಶೀತದ ಅಲೆಯ ಪ್ರಭಾವ ತೀವ್ರವಾಗಿದೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.









































































































error: Content is protected !!
Scroll to Top