ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 18ರಂದು ಹೆರ್ಮುಂಡೆ ಗ್ರಾಮದಲ್ಲಿ ಸಂಭವಿಸಿದೆ. ಸುಬ್ರಾಯ ನಾಯಕ್ (78) ನೇಣಿಗೆ ಶರಣಾದವರು. ಇವರಿಗೆ ಮದ್ಯಪಾನ ಮಾಡುವ ಚಟವಿದ್ದು, ಪತ್ನಿಯ ಮರಣಾನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಕೆ.ಎಂ.ಸಿ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅತಿಯಾದ ಮದ್ಯಪಾನ ಹಾಗೂ ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ. 18ರಂದು ರಾತ್ರಿ 8 ಗಂಟೆಯಿಂದ ಡಿ. 19ರ ಬೆಳಿಗ್ಗೆ 7 ಗಂಟೆಯ ಮಧ್ಯಾವಧಿಯಲ್ಲಿ ನೈಲಾನ್ ಹಗ್ಗದಿಂದ ತೊಟ್ಟಿಲಿಗೆ ಕಟ್ಟಲು ಇಟ್ಟಿರುವ ರಿಂಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

































































































error: Content is protected !!
Scroll to Top