ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ವತಿಯಿಂದ ನಡೆಯಲಿರುವ ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನ ಡಿ.28 ರಂದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಪತ್ರಕರ್ತ ಸಿದ್ಧಾಪುರ ವಾಸುದೇವ ಭಟ್ ಅವರು ವಹಿಸಲಿದ್ದಾರೆ. ಅವರ ಮನೆಗೆ ಕಾರ್ಕಳ ಕಸಾಪ ಸಾಹಿತ್ಯ ಪರಿಷತ್ತಿನ ಸದಸ್ಯರು ಭೇಟಿ ನೀಡಿ ಆಮಂತ್ರಣ ಮತ್ತು ಫಲಪುಷ್ಪಗಳನ್ನು ನೀಡಿ ಗೌರವಿಸಿದರು.
ಈ ಸಂದರ್ಭ ಕಾರ್ಕಳ ಕಸಾಪ ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರಂಗ ಸಂಸ್ಕೃತಿ ಅಧ್ಯಕ್ಷ ನಿತ್ಯಾನಂದ ಪೈ, ಜಿಲ್ಲಾ ಪ್ರತಿನಿಧಿ ನರಸಿಂಹ ಮೂರ್ತಿ, ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು, ಪರಿಷತ್ತು ಸದಸ್ಯರಾದ ಡಾ. ಸುಮತಿ, ಸುಲೋಚನಾ ಬಿ. ವಿ., ಡಾ. ಮಾಲತಿ ಪೈ ಹಾಗೂ ಸಮ್ಮೇಳನಾಧ್ಯಕ್ಷರ ಮನೆಯವರು ಉಪಸ್ಥಿತರಿದ್ದರು.









































































































error: Content is protected !!
Scroll to Top