ಶಿವಪುರ ಸರಕಾರಿ ಪ್ರೌಢಶಾಲೆ – ಪ್ರತಿಭಾ ಪುರಸ್ಕಾರ

ಹೆಬ್ರಿ : ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 24ರಂದು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಾಲಾ ಹಳೆ ವಿದ್ಯಾರ್ಥಿಗಳಾದ ಡಾ. ಗೋಪಾಲ ಪೂಜಾರಿ ಹಾಗೂ ರವಿರಾಜ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ದಾನಿಗಳು ಕೊಡ ಮಾಡುವ ದತ್ತಿ ನಿಧಿ ಪುರಸ್ಕಾರಗಳನ್ನು ವಿತರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಶಿವಪುರ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಂಕರ ಬಡ್ಕಿಲ್ಲಾಯ, ತಾಲೂಕು ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ರಮೇಶ್ ಕುಮಾರ್ ಶಿವಪುರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶರ್ಮಿಳ ಸ್ವಾಗತಿಸಿದರು. ಶಿಕ್ಷಕರಾದ ಗಣೇಶ್ ಮರಕಾಲ ಕಾರ್ಯಕ್ರಮ ನಿರೂಪಿಸಿ, ರಾಜೇಶ್ ನಾಯಕ್ ವಂದಿಸಿದರು.



































































































error: Content is protected !!
Scroll to Top