ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ – ಎಸ್‌ವಿಟಿ ವಿದ್ಯಾರ್ಥಿನಿಯರ ಸಾಧನೆ

ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಅನ್ವಿತ ಚಿನ್ನದ ಪದಕ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ರಕ್ಷಾ, ನೇಹಾ, ಮೇಘನಾ ಬೆಳ್ಳಿಯ ಪದಕ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಪ್ರೇಕ್ಷಾ ಇವರು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಿರಿಯ ಸಹ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.















error: Content is protected !!
Scroll to Top