ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಸಭಾ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆ

ಕಾರ್ಕಳ : ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಲ್ಲೂರು ಗ್ರಾಮದ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಬಳಿ ಸಭಾ ಭವನ ನಿರ್ಮಾಣ ಕಾಮಗಾರಿಗೆ 50 ಲಕ್ಷ ರೂ. ಅನುದಾನ ಮಂಜೂರಾಗಿದ್ದು ಅದರಲ್ಲಿ 25 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ತಿಳಿಸಿರುತ್ತಾರೆ.

ಜೈನ ಸಮುದಾಯದ ಐತಿಹಾಸಿಕ ಹೆಗ್ಗುರುತಾದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿನ ಶ್ರೀ ಗೊಮ್ಮಟೇಶ್ವರ ಏಕಶಿಲಾ ಪ್ರತಿಮೆಗೆ 2027 ಜನವರಿಯಲ್ಲಿ 12 ವರ್ಷಗಳಿಗೆ ಒಮ್ಮೆ ನಡೆಯುವ ವಿಶ್ವ ವಿಖ್ಯಾತ, ಐತಿಹಾಸಿಕ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಮಹಾ ಮಸ್ತಕಾಭಿಷೇಕ ನಡೆಯಲಿರುವುದರಿಂದ ದೇಶ ವಿದೇಶಗಳಿಂದ ಅನೇಕ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಆಗಮಿಸಲಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾತ್ರಿ ನಿವಾಸ, ಅನ್ನ ಛತ್ರಗಳನ್ನು ಒಳಗೊಂಡ ಸುಸಜ್ಜಿತ ಸಭಾಭವನಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಕಾರ್ಕಳ ಗೊಮ್ಮಟೇಶ್ವರ ಬೆಟ್ಟದ ಬಳಿ, ನಲ್ಲೂರು ಕೂಷ್ಮಾಂಡಿನಿ ಜೈನ ಬಸದಿ ಸಮೀಪ ಮತ್ತು ವರಂಗ ಜೈನ ಬಸದಿ ಬಳಿ ಸಭಾ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿತ್ತು. ಇತ್ತೀಚಿಗೆ ನಡೆದ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖಾ ಸಚಿವರು, ಅಧಿಕಾರಿಗಳ ಗಮನಕ್ಕೆ ತಂದ ಪರಿಣಾಮ ಇದೀಗ ನಲ್ಲೂರು ಕೂಷ್ಮಾಂಡಿನಿ ಜೈನ ಬಸದಿ ಬಳಿ ಸಭಾ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಮಂಜೂರಾಗಿದೆ.

ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಇನ್ನೂ ಆನೇಕ ಅಭಿವೃದ್ಧಿ ಕಾರ್ಯಗಳು, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿದ್ದು, ಮುಖ್ಯಮಂತ್ರಿಗಳು ಮುಂದಿನ ಬಜೆಟಟ್‌ನಲ್ಲಿ ಅನುದಾನ ಕಾಯ್ದಿರಿಸುವುದಾಗಿ ಭರವಸೆ ನೀಡಿರುತ್ತಾರೆ ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.









































































































error: Content is protected !!
Scroll to Top