ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಕ್ರೀಡಾ ಪ್ರೋತ್ಸಾಹ ಧನಕ್ಕೆ 2025 ನೇ ಸಾಲಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ / ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ/ ಪದಕ ಪಡೆದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2026 ರ ಜ. 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ. ಸಂಖ್ಯೆ: 0820-2521324, ಮೊ. ಸಂಖ್ಯೆ 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕ್ರೀಡಾ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ










