ಢಾಕಾ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಬೇಗಂ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸುತ್ತಾರೆ ಎಂದು ಭಾವಿಸಲಾಗಿತ್ತು.
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ
















































