ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ

ಉಡುಪಿ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಶುಶ್ರೂಷಕ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ಒಳಮೀಸಲಾತಿಯ ವರ್ಗೀಕರಣದಿಂದ ತಡೆ ಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗೆ ಪರಿಷ್ಕೃತ ರೋಸ್ಟರ್‌ಗಳನ್ನು ಅಳವಡಿಸಿ ಮರು ಅರ್ಜಿ ಆಹ್ವಾನಿಸಲಾಗಿದೆ. ಜನವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -udupi.nic.in-ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.





























































































































error: Content is protected !!
Scroll to Top