8 ಕಾಲು ಸಂಕ ನಿರ್ಮಾಣಕ್ಕೆ 1 ಕೋಟಿ ರೂ. ಅನುಮೋದನೆ – ಸುನಿಲ್‌ ಕುಮಾರ್‌

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ಕಾಲು ಸಂಕ ನಿರ್ಮಾಣಕ್ಕಾಗಿ ಸರಕಾರದಿಂದ 1 ಕೋಟಿ ರೂ. ಅನುದಾನಕ್ಕೆ ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ರೈತರಿಗೆ, ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಹಳ್ಳ ತೋಡುಗಳನ್ನು ದಾಟಿ ಸಂಚರಿಸುವಂತ ಪರಿಸ್ಥಿತಿ ಇದೆ. ಇಂತಹ ಪ್ರದೇಶಗಳಲ್ಲಿ ರೈತರು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಮತ್ತು ರೈತರು ತಮ್ಮ ಕೃಷಿಗೆ ಸಂಬಂಧಿಸಿ ಯಂತ್ರೋಪಕರಣಗಳನ್ನು ಸಾಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕಾಲು ಸಂಕಗಳ ನಿರ್ಮಾಣಕ್ಕೆ ನಮ್ಮ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಸಚಿವರು ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ ಒದಗಿಸುತ್ತಿದ್ದಾರೆ. ಡಿ. 31ರಂದು ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









































































































error: Content is protected !!
Scroll to Top