ಕಾರ್ಕಳ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಅನುದಾನ ಒದಗಿಸುವಂತೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಸುನಿಲ್‌ ಮನವಿ

ಕಾರ್ಕಳ : ಮುಂದಿನ ವರ್ಷ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಕಾರ್ಕಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಶಾಸಕ ವಿ. ಸುನಿಲ್‌ ಕುಮಾರ್‌ ಮನವಿ ಮಾಡಿಕೊಂಡರು. ಜ. 7ರಂದು ದೆಹಲಿಯ ಶಾಸ್ತ್ರಿ ಭವನದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸುನಿಲ್‌ ಕುಮಾರ್‌ ಅವರು ಕಾರ್ಕಳದ ಪ್ರವಾಸೋದ್ಯಮ ಅಭಿವೃದ್ಧಿಯ ಕುರಿತು ಚರ್ಚಿಸಿದರು. ಸ್ಪಂದಿಸಿದ ಕೇಂದ್ರ ಸಚಿವರು ಅನುದಾನ ಒದಗಿಸುವ ಭರವಸೆ ನೀಡಿದರು.









































































































error: Content is protected !!
Scroll to Top