ಎಸ್ಸೆಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ – 8 ಮಂದಿ ಬಂಧನ

ಬೆಂಗಳೂರು : ಎಸ್ಸೆಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ 8 ಮಂದಿಯನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಜ. 9ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜ. 8ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀರಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಹೆಡ್ ಮಾಸ್ಟರ್‌ಗಳು, ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್ ಹಾಗೂ ಶಿಕ್ಷಕರ ಬಂಧನವಾಗಿದೆ.

ಈಗ ಪೊಲೀಸರು ಪ್ರಶ್ನೆಪತ್ರಿಕೆಯನ್ನು ವೈರಲ್ ಮಾಡಿದವರ ವಾಟ್ಸಪ್‌, ಇನ್‌ಸ್ಟಾ, ಟೆಲಿಗ್ರಾಂ ಖಾತೆಯ ಜೊತೆ ಮೊಬೈಲ್ ಪರಿಶೀಲನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ.

ಬಂಧಿತರು
ಗಿರೀಶ್ ವಿ.ಡಿ – ಮುಖ್ಯೋಪಾಧ್ಯಾಯ(ತುಮಕೂರು), ಅಮ್ಜದ್ ಖಾನ್ – ಸಹ ಶಿಕ್ಷಕ(ರಾಮನಗರ), ಶಾಹಿದಾ ಬೇಗಂ – ಮುಖ್ಯ ಶಿಕ್ಷಕಿ(ಕಲಬುರಗಿ), ಫಾಹ್ಮಿದಾ – ಸಹ ಶಿಕ್ಷಕಿ(ಕಲಬುರಗಿ), ಮೊಹಮ್ಮದ್ ಸಿರಾಜುದ್ದೀನ್ – ಶಿಕ್ಷಕ(ಕಲಬುರಗಿ), ಫರ್ಜಾನಾ ಬೇಗಂ – ಶಿಕ್ಷಕಿ(ಕಲಬುರಗಿ)

















































error: Content is protected !!
Scroll to Top