ಹೆಬ್ರಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆದ ಲಕ್ಷಕಂಠ ಗೀತಾ ಪಾರಾಯಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸಿ ಅವರಿಗೆ ನೀಡಿದ್ದ ಹೆಬ್ರಿ ಪಿ.ಆರ್.ಎನ್. ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಆಶಿಶ್ ಎಚ್. ಅವರಿಗೆ ಪ್ರಧಾನಿ ಕಚೇರಿಯಿಂದ ಅಭಿನಂದನಾ ಪತ್ರ ದೊರೆತಿದೆ. ವಿದ್ಯಾರ್ಥಿಗೆ ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಹಾಗೂ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.
ಅಮೃತಭಾರತಿ ವಿದ್ಯಾರ್ಥಿಗೆ ಪ್ರಧಾನಿಯಿಂದ ಅಭಿನಂದನಾ ಪತ್ರ
























