ಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ – ಹಣಕ್ಕೆ ಬೇಡಿಕೆ – ಸೆನ್‌ಗೆ ದೂರು

ಉಡುಪಿ : ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಹಾಗೂ ವ್ಯಾಟ್ಸಾಪ್‌ಗಳಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸಿ, ಬೇರೆ ಬೇರೆ ಕಾರಣಗಳನ್ನು ನೀಡಿ ಹಣ ವರ್ಗಾಯಿಸುವಂತೆ ಸಂದೇಶಗಳನ್ನು ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉಡುಪಿ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಿರುತ್ತಾರೆ.
ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ಬಳಸಿ ಹಣ ವರ್ಗಾವಣೆಗೆ ಅಥವಾ ಇನ್ನಿತರೆ ಬೇಡಿಕೆಗಳ ಸಂದೇಶಗಳು ಸ್ವೀಕೃತವಾದಲ್ಲಿ ಅಂತಹ ಸಂದೇಶಗಳಿಗೆ ಸ್ಪಂದಿಸದೇ ಸಂದೇಶ ಸ್ವೀಕೃತವಾದ ತಕ್ಷಣ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಡಿಸಿಯವರು ಮನವಿ ಮಾಡಿಕೊಂಡಿದ್ದಾರೆ.









error: Content is protected !!
Scroll to Top