ಪರಶುರಾಮ ಥೀಮ್ ಪಾರ್ಕ್‌ನಿಂದ ಫ್ಯಾನ್ ಕಳವು : ಇಬ್ಬರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಬೈಲೂರು ಪರಶುರಾಮ ಥೀಮ್ ಪಾರ್ಕ್‌ ಕಟ್ಟಡದ ಫ್ಯಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಯಸ್ಸಿನವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2025ರ ಜನವರಿಯಿಂದ ಜೂನ್ ತಿಂಗಳ ಮಧ್ಯಾವಧಿಯಲ್ಲಿ ಪರಶುರಾಮ ಥೀಮ್ ಪಾರಕ್‌ನಿಂದ ಎರಡು ಫ್ಯಾನ್‌ಗಳನ್ನು ಕಳವು ಮಾಡಿದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನವರ ವಿರುದ್ಧ ಜ.12ರಂದು ಮಂಜುನಾಥ್ ಜೋಗಿ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.
ಈ ಪ್ರಕರಣಕ್ಕೂ ಇತ್ತೀಚೆಗೆ ನಡೆದ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ತಾಮ್ರದ ಮೇಲ್ಛಾವಣಿ ಕಳವು ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.



























































































error: Content is protected !!
Scroll to Top