ಕಾರ್ಕಳ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ.
ಮುದ್ದಣ್ಣ ನಗರದ ವಾರಿಜಾ ಎಂಬವರ ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ಹಾನಿಯಾಗಿದ್ದು ಅವಘದಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ. ಘಟನೆಯಲ್ಲಿ ಸುಮಾರು 2 ಲಕ್ಷ ರೂ. ನಷ್ಟ ಉಂಟಾಗಿದೆ.




