ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ಆರೋಪ ಅಲ್ಲಗಳೆದ ಡಿಜಿಪಿ

ಬೆಂಗಳೂರು : ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೋ ಈಗ ವೈರಲ್‌ ಆಗಿದೆ.

ಡಿಜಿಪಿ ರಾಮಚಂದ್ರರಾವ್ ಗೋಲ್ಡ್ ಸ್ಮಗಲ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ತಂದೆಯಾಗಿದ್ದು. ರನ್ಯಾರಾವ್ ಪ್ರಕರಣಕ್ಕಿಂತ ಮೊದಲೇ ಈ ರಾಸಲೀಲೆ ನಡೆದಿದೆ ಎನ್ನಲಾಗಿದೆ. ರಾಮಚಂದ್ರರಾವ್ ತಮ್ಮ ಹುದ್ದೆಯ ಘನತೆ ಮರೆತು ಸಮವಸ್ತ್ರದಲ್ಲೇ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ವಿಡಿಯೋ?
ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿದೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಪೊಲೀಸ್‌ ಇಲಾಖೆಗೆ ತೀವ್ರ ಮುಜುಗರ ತಂದಿದೆ. ಈ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿವೆ.

ಆರೋಪ ಅಲ್ಲಗಳೆದ ಡಿಜಿಪಿ
ಇನ್ನು ಈ ಆರೋಪವನ್ನು ಡಿಜಿಪಿ ರಾಮಚಂದ್ರರಾವ್ ಅವರು ಅಲ್ಲಗಳೆದಿದ್ದು, ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ.
ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರವಾಗಿದೆ. ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಷಡ್ಯಂತ್ರ ರೂಪಿಸಿವೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಗೃಹ ಇಲಾಖೆಗೆ ವರದಿ ನೀಡಲು ಸಿಎಂ ಸೂಚನೆ
ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಭೇಟಿಗೆ ಅನುಮತಿ ನೀಡದ ಪರಮೇಶ್ವರ್‌
ವಿಡಿಯೋ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಲು ಇಂದು ರಾಮಚಂದ್ರ ರಾವ್‌ ಪರಮೇಶ್ವರ್‌ ಕಚೇರಿಗೆ ಆಗಮಿಸಿದ್ದರು. ಮನೆ ಒಳಗೆ ರಾಮಚಂದ್ರ ರಾವ್‌ ಹೋಗುವ ಮುನ್ನವೇ ಪರಮೇಶ್ವರ್ ಅವರು ಭೇಟಿಗೆ ನಿರಾಕರಿಸಿದರು. ಸಿಬ್ಬಂದಿ ಮೂಲಕ ಭೇಟಿ ಆಗುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದ್ದಾರೆ.



















error: Content is protected !!
Scroll to Top