ಜಂಟಿ ಅಧಿವೇಶನದಲ್ಲಿ ಹೈ ಡ್ರಾಮಾ – ಭಾಷಣ ಓದದೆ ತೆರಳಿದ ಗವರ್ನರ್‌ ಗೆಹ್ಲೋಟ್

ಬೆಂಗಳೂರು : ಇಂದಿನಿಂದ ಆರಂಭವಾಗಿರುವ ರಾಜ್ಯ ವಿಧಾನಸಭೆ–ವಿಧಾನಪರಿಷತ್ ಜಂಟಿ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಜರಾಗಿದ್ದರು. ಆದರೆ ಸರ್ಕಾರದ ಭಾಷಣಕ್ಕೆ ರಾಜ್ಯಪಾಲರು ವಿರೋಧ ವ್ಯಕ್ತ ಪಡಿಸಿದ್ದು, ಕೇವಲ ಎರಡೇ ಸಾಲಿನಲ್ಲಿ ಭಾಷಣ ಮುಗಿಸಿ ಅಧಿವೇಶನದಿಂದ ಹೊರ ನಡೆದಿದ್ದಾರೆ. ರಾಜ್ಯಪಾಲರು ನಿರ್ಗಮಿಸುತ್ತಿದ್ದಂತೆ ಕೈ ಶಾಸಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಭಾಷಣ ಮಾಡಿದ ರಾಜ್ಯಪಾಲರು, “ನನ್ನ ಸರ್ಕಾರವು ರಾಜ್ಯದ ಅರ್ಥಿಕ, ಸಾಮಾಜಿಕ, ಭೌತಿಕ ಅಭಿವೃದ್ಧಿಯನ್ನು ದ್ವಿಗುಣ ಮಾಡಲು ಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ” ಎಂದಷ್ಟೇ ಹೇಳಿ, ಭಾಷಣ ಮುಗಿಸಿದ್ದಾರೆ. ರಾಜ್ಯಪಾಲರು ಭಾಷಣ ಪೀಠದಿಂದ ಕೆಳಗಿಳಿದು ಬಂದಾಗ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕರು ರಾಜ್ಯಪಾಲರಿಗೆ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

















































error: Content is protected !!
Scroll to Top