ಬೆಂಗಳೂರು : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳ ತಳ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತೇನೆ. ಸಮಾಜದ ಮುಖಂಡರು ಹಾಗೂ ಸ್ವಾಮೀಜಿಗಳ ವಿಶ್ವಾಸ ಪಡೆದು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯದಂತೆ ಉತ್ತಮವಾಗಿ ಸೇವೆ ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ನಿಗಮದ ಪ್ರಭಾರಿ ವ್ಯವಸ್ಥಾಪಕ ನಿರ್ದೇಶಕ ಡಾ. ರಾಜೀವ ಎನ್. ಕೂಲೇರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
















































