ಇನ್‌ಸ್ಟಾಗ್ರಾಮ್ ರೀಲ್ಸ್ ಸ್ಟಾರ್‌ ಆಶಾ ಪಂಡಿತ್ ಹೃದಯಾಘಾತದಿಂದ ನಿಧನ

ಮಂಗಳೂರು : ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್ ಜ.23ರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.

ಆಶಾ ಪಂಡಿತ್ ತಮ್ಮ ಬೈಗುಳದ ರೀಲ್‌ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ದರು. ಅವರು ಪಡೀಲ್ ಬಳಿ ಒಂದು ಸಣ್ಣ ಕ್ಯಾಂಟಿನ್‌ ನಡೆಸುತ್ತಿದ್ದರು.
ಕುಟುಂಬದ ಮೂಲಗಳ ಪ್ರಕಾರ, ಅವರಿಗೆ ನಿನ್ನೆ ರಾತ್ರಿ ವಾಂತಿ ಸಮಸ್ಯೆ ಉಂಟಾಗಿತ್ತು. ಶುಕ್ರವಾರ ಬೆಳಗಿನ ಜಾವ ಅವರಿಗೆ ಹೃದಯಾಘಾತವಾಗಿ ಮನೆಯ ಅಂಗಳದಲ್ಲಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಆಗಲೇ ಮೃತಪಟ್ಟಿದ್ದರು ಎಂದು ವರದಿಯಾಗಿದೆ.











































































error: Content is protected !!
Scroll to Top