ಕಾರ್ಕಳ : ಲೈನ್ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಜ. 29 ಮತ್ತು ಜ. 31ರಂದು ಬಜಗೋಳಿ, ಹೊಸ್ಮಾರು ಮತ್ತು ಮಿಯ್ಯಾರು ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ರೆಂಜಾಳ, ಬೊರ್ಕಟ್ಟೆ, ಕಾಜರಬೈಲು, ಅಡ್ಡರಪಲ್ಕೆ, ನೆಲ್ಲಿಗುಡ್ಡೆ, ಮಂಜಡ್ಕ, ಮಿಯ್ಯಾರು ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಜ. 29 ಮತ್ತು ಜ. 31ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ








