ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ – ವಾರ್ಷಿಕ ಮಹೋತ್ಸವದ ಮೂರನೇ ದಿನದ ಸಂಭ್ರಮ – ಗಣ್ಯರ ಭೇಟಿ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಜ.27ರಂದು ಹತ್ತು ದಿವ್ಯ ಬಲಿಪೂಜೆಗಳು ನೆರವೇರಿತು.
ಈ ವರ್ಷದ ಮಹೋತ್ಸವದ ಸಂದೇಶವಾಗಿರುವ ʼನಾನು ನಿನ್ನನ್ನು ಪ್ರೀತಿಸಿದ್ದೇನೆʼ ಎಂಬ ಧ್ಯೇಯ ವಾಕ್ಯದ ಆಧಾರದ ಮೇಲೆ, ಬಡವರ ಬಗೆಗಿನ ಕಾಳಜಿ, ಮಾನವೀಯ ಸೇವೆ ಮತ್ತು ಸಮಾಜದತ್ತ ನಮ್ಮ ಜವಾಬ್ದಾರಿ ಕುರಿತು ಬೋಧನೆ ನೀಡಲಾಯಿತು. ದಿನದ ಪ್ರಮುಖ ಬಲಿಪೂಜೆಯನ್ನು ಅಲಹಬಾದ್ ಧರ್ಮಪ್ರಾಂತ್ಯದ ಪರಮಪೂಜ್ಯ ಲುವಿಸ್ ಮಸ್ಕರೇನ್ಹಸ್ ನೆರವೇರಿಸಿದರು.

ಮಾಜಿ ಸಚಿವ ರಮಾನಾಥ್ ರೈ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ತಹಶೀಲ್ದಾರ್‌ ಪ್ರದೀಪ್‌ ಆರ್.‌, ಪದ್ಮರಾಜ್ ಹೆಗ್ಡೆ, ದಿನೇಶ್ ಹೆಗ್ಡೆ ಸೇರಿದಂತೆ ಮೊದಲಾದ ಗಣ್ಯರು ಬಸಿಲಿಕಾಕ್ಕೆ ಭೇಟಿ ನೀಡಿದರು. ಈ ಸಂದರ್ಭ ಅವರೊಂದಿಗೆ ಬಸಿಲಿಕಾದ ಉಪಾಧ್ಯಕ್ಷ ಸಂತೋಷ್ ಡಿಸಿಲ್ವಾ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹ, ನಿಯೋಜಿತ ಉಪಾಧ್ಯಕ್ಷ ವಂದೀಶ್ ಮಥಾಯಸ್, ನಿಯೋಜಿತ ಕಾರ್ಯದರ್ಶಿ ಮೆಲ್ವಿನ್ ಕ್ಯಾಸ್ತೆಲಿನೊ, ಪಿಯುಸ್ ರೊಡ್ರಿಗಸ್ ಉಪಸ್ಥಿತರಿದ್ದರು.









































































































error: Content is protected !!
Scroll to Top