ದೆಹಲಿ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನವಾಗಿರುವ ಬಗ್ಗೆ ವರದಿಯಾಗಿದೆ.
ಅಜಿತ್ ಪವಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಬಾರಾಮತಿ ವಿಮಾನ ನಿಲ್ದಾಣದ ಬಳಿ ಘಟನೆ ಸಂಭವಿಸಿದಾಗ ಅಜಿತ್ ಪವಾರ್ ಅವರ ಅಂಗರಕ್ಷಕರು ಸಹ ವಿಮಾನದಲ್ಲಿದ್ದರು ಎಂದು ವರದಿಯಾಗಿದೆ.
ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ.










