ವಿಮಾನ ಪತನ – ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಆರು ಮಂದಿ ದುರ್ಮರಣ

ಮುಂಬೈ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ಐವರು ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ 8.30ಕ್ಕೆ ದುರಂತ ಸಂಭವಿಸಿದೆ. ಬಾರಾಮತಿಯಲ್ಲಿ ಅಪಘಾತಕ್ಕೀಡಾದ ವಿಮಾನದ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನದಲ್ಲಿ ಇನ್ನೂ 2 ಸಿಬ್ಬಂದಿ (1 ಪಿಎಸ್ಒ ಮತ್ತು 1 ಅಟೆಂಡೆಂಟ್) ಮತ್ತು 2 ಸಿಬ್ಬಂದಿ (ಪಿಐಸಿ+ಎಫ್‌ಒ) ಸದಸ್ಯರೊಂದಿಗೆ ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ ಎಂದು ಹೇಳಿದೆ.

ಮುಂಬೈನಿಂದ ಬೆಳಗ್ಗೆ 8.10ಕ್ಕೆ ವಿಮಾನ ಬಾರಾಮತಿ ಕಡೆ ಪ್ರಯಾಣ ಮಾಡಿತ್ತು. ಇನ್ನೇನು ಬಾರಾಮತಿಯಲ್ಲಿ ಲ್ಯಾಂಡಿಂಗ್‌ ಆಗಬೇಕು ಎನ್ನುವಾಗ ಈ ಅಪಘಾತ ಸಂಭವಿಸಿದೆ. 45XR ಮಾದರಿಯ ಸಣ್ಣ ಏರ್‌ಕ್ರಾಫ್ಟ್‌ ಇದಾಗಿದ್ದು, ಬೆಳಗ್ಗೆ 8.10ಕ್ಕೆ ಮುಂಬೈನಿಂದ ಹೊರಟಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.

ಲಿಯರ್‌ಜೆಟ್ 45 ವಿಮಾನ ಮುಂಬೈನಿಂದ ಹಾರಾಟ ಆರಂಭಿಸಿದ ಒಂದು ಗಂಟೆಯ ನಂತರ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಜಿಲ್ಲಾ ಪರಿಷತ್‌ಗಳು ಮತ್ತು ಪಂಚಾಯತ್ ಸಮಿತಿಗಳಿಗೆ ನಡೆಯುತ್ತಿರುವ ಚುನಾವಣೆಗಳ ಮಧ್ಯೆ, ಪವಾರ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದರು.

ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸತತವಾಗಿ ದೀರ್ಘಕಾಲ ಸೇವೆ ಸಲ್ಲಿಸಿದವರಲ್ಲಿ ಒಬ್ಬರಾಗಿದ್ದಾರೆ. ಮುಖ್ಯಮಂತ್ರಿಗಳಾದ ಪೃಥ್ವಿರಾಜ್ ಚವಾಣ್, ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಅವರು 1991 ರಲ್ಲಿ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ನಂತರ ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಟ್ಟರು. ಅವರು ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾದರು. ಮೊದಲು 1991 ರ ಉಪಚುನಾವಣೆಯಲ್ಲಿ ಗೆದ್ದರು ಮತ್ತು ನಂತರ 1995, 1999, 2004, 2009 ಮತ್ತು 2014 ರಲ್ಲಿ ಗೆಲುವು ಸಾಧಿಸಿದ್ದರು.

ನವೆಂಬರ್ 2019 ರಲ್ಲಿ NCP ಯಲ್ಲಿ ಒಡಕು ಮೂಡಿತು. ಹೀಗಾಗಿ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವನ್ನು ಸೇರಿಕೊಂಡು ಉಪಮುಖ್ಯಮಂತ್ರಿಯಾದರು. ಫೆಬ್ರವರಿ 2024ರಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಿತು.









































































































error: Content is protected !!
Scroll to Top