ರಾಜ್ಯದ ಪೊಲೀಸರಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ : ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ

ಬೆಂಗಳೂರು : ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡುವಂತೆ ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ, ಒತ್ತಡ ಕಡಿಮೆಯಾಗುತ್ತದೆ ಮತ್ತು ಇದು ಕೆಲಸದ ಮೇಲಿನ ದಕ್ಷತೆಯನ್ನು ಹೆಚ್ಚಿಸುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.









































































































error: Content is protected !!
Scroll to Top