ಸರಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

ಬೆಂಗಳೂರು : ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯಗೊಳಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಜ.29ರಂದು ನಡೆದ ಸಭೆಯಲ್ಲಿ ತೆಗೆದುಕೊಂಡ ಈ ನಿರ್ಧಾರಕ್ಕೆ ಏ. 24ರಂದು ಸರ್ಕಾರ ಚಾಲನೆ ನೀಡಲಿದೆ. ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಬೇಕು. ಪುರುಷ ನೌಕರರು ಖಾದಿ ಬಟ್ಟೆಯ ಪ್ಯಾಂಟ್, ಶರ್ಟ್ ಹಾಗೂ ಓವರ್ ಕೋಟ್, ಮಹಿಳಾ ನೌಕರರು ಸಿಲ್ಕ್ ಸೀರೆ ಅಥವಾ ಛೂಡಿದಾರವಾಗಿ ಬಳಸಿಕೊಳ್ಳಬಹುದು ಎಂದು ಸೂಚಿಸಿದ್ದಾರೆ.

ಎಲ್ಲಾ ನೌಕರರು ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಳಿಗೆಗಳಲ್ಲಿಯೇ ಬಟ್ಟೆಯನ್ನು ಖರೀದಿಸಬೇಕು. ಜೊತೆಗೆ ಖಾದಿ ಗ್ರಾಮೋದ್ಯೋಗ ಮಂಡಳಿ ಕೂಡ ರಿಯಾಯಿತಿ ನೀಡಬೇಕು. ಸದ್ಯ ನೀಡುತ್ತಿರುವ ರಿಯಾಯಿತಿಗಿಂತ ಹೆಚ್ಚಿನ 5% ರಿಯಾಯಿತಿ ನೀಡಬೇಕು ಎಂದು ತಿಳಿಸಿದ್ದಾರೆ.









































































































error: Content is protected !!
Scroll to Top