ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಆಚರಿಸಲಾಯಿತು. ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸಿ ನಮನ ಸಲ್ಲಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ, ಉಪಾಧ್ಯಕ್ಷೆ ಶಶಿಕಲಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಹಿಂದುಳಿದ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆಡಿಪಿ ಸದಸ್ಯರಾದ ರುಕ್ಮಯ ಶೆಟ್ಟಿಗಾರ್, ಗ್ಯಾರಂಟಿ ಸಮಿತಿ ಸದಸ್ಯರಾದ ಫಿಲಿಪ್ ಮಸ್ಕರೇನಸ್, ಹೇಮಂತ್ ಆಚಾರ್ಯ, ಯತೀಶ್ ಕಲ್ಯಾ, ಸಂತೋಷ್ ದೇವಾಡಿಗ, ಶೋಭಾ ಪ್ರಸಾದ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಪುಣ್ಯಸ್ಮರಣೆ














































































