ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳಿಂದ ಕೆ.ವಿ. ಪ್ರಭಾಕರ್‌ ಭೇಟಿ

ಬೆಂಗಳೂರು : ಗ್ರಾಮೀಣ ಪತ್ರಕರ್ತರಿಗೆ ಸರಕಾರಿ ಸೌಲತ್ತುಗಳನ್ನು ನೀಡುವಂತೆ ಹಾಗೂ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹಾರ ನೀಡುವಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ(ರಿ)ದ ರಾಜ್ಯ ಸಮಿತಿಯು ವಿಧಾನ ಸೌಧದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ ಅವರನ್ನು ಭೇಟಿ ಮಾಡಿತು.

ಬೆಂಗಳೂರು : ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೆಂಗಳೂರು ವಿಧಾನ ಸೌಧದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ಜ. 30ರಂದು ಭೇಟಿ ಮಾಡಿದರು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಜಿ.ಎಂ. ರಾಜಶೇಖರ್ ಅವರು ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ತಿಳಿಸಿ, ಮುಂದಿನ ದಿನಗಳಲ್ಲಿ ಪತ್ರಕರ್ತರಿಗೆ ಭದ್ರತೆ ಹಾಗೂ ಸವಲತ್ತು ನೀಡುವಂತೆಯೂ ಮನವಿ ಮಾಡಿಕೊಂಡರು. ಸಂಘದ ರಾಜ್ಯ ಕಾರ್ಯದರ್ಶಿ ವಸಂತ್ ಕುಮಾರ್, ರಾಜ್ಯ ಉಪಾಧ್ಯಕ್ಷ, ನಿವೃತ್ತ ಸೇನಾಧಿಕಾರಿ ಕೃಷ್ಣಪ್ಪ ಹಾಗೂ ಸಮಿತಿಯ ಚಂದ್ರಶೇಖರ್ ಬೆಳಗುಂಬ ಹಾಲಪ್ಪ, ಅನಿಲ್ ಚಿಕ್ಕಮಗಳೂರು, ವಿಶು ಕುಮಾರ್ ಅರಸೀಕೆರೆ ಉಪಸ್ಥಿತರಿದ್ದರು.









































































































error: Content is protected !!
Scroll to Top