ಕಾರ್ಕಳ : ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ಗ್ರಂಥಾಲಯ ಸಪ್ತಾಹವನ್ನು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲೂನ್ಕರ್ ಉದ್ಘಾಟಿಸಿದರು. ಕಾಲೇಜಿನ ಉಪ ಪ್ರಾಂಶುಪಾಲ ಡಾ. ನಾಗೇಶ್ ಪ್ರಭು ಪುಸ್ತಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಗ್ರಂಥಾಲಯ ಸಿಬ್ಬಂದಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗ್ರಂಥಪಾಲಕ ಡಾ. ಪ್ರೀತಂ ಶೆಟ್ಟಿ ಕೆ. ವಿ. ಸ್ವಾಗತಿಸಿ ಪ್ರಸ್ತಾವನೆಗೈದರು. ಸಹಾಯಕ ಗ್ರಂಥಪಾಲಕ ಸುಧಾಕರ್ ಕೆ. ವಂದಿಸಿದರು. ಸಹಾಯಕ ಗ್ರಂಥಪಾಲಕ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ನಿಟ್ಟೆ ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ








