ಸ್ಫೋಟಕ ಬಳಸಿ ಬಂಡೆ ಸ್ಫೋಟ ಪ್ರಕರಣ – ಇಬ್ಬರ ಬಂಧನ

ಕಾರ್ಕಳ : ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಆತನ ಮಗ ಪವನ್ ಕುಮಾರ್ (31) ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಜ.21ರಂದು ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆಯನ್ನು ಕೈಗೊಂಡ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.









error: Content is protected !!
Scroll to Top