ಕಡ್ತಲದಲ್ಲಿ ಅಹವಾಲು ಸ್ವೀಕಾರ

ಕಾರ್ಕಳ : ಕಡ್ತಲ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಫೆ. 10ರಂದು ಸಾರ್ವಜನಿಕ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಗ್ರಾ. ಪಂ.ನಲ್ಲಿನ ಪ್ರಮುಖ ಸಮಸ್ಯೆಗಳಾದ 9/11 ತಾಂತ್ರಿಕ ಸಮಸ್ಯೆ, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಮುಂದಿನ ಬಜೆಟ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

ಕಾರ್ಕಳ ತಹಶೀಲ್ದಾರ್‌ ಪ್ರದೀಪ್‌ ಆರ್.‌, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಎಂ.ವಿ., ತಾಲೂಕು ಕಚೇರಿಯ ತಹಸೀಲ್ದಾರ್ ಪ್ರದೀಪ್ ಆರ್., ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ತೋಟಗಾರಿಕಾ ಇಲಾಖೆಯಿಂದ ಮಂಜೂರಾದ ಸವಲತ್ತನ್ನು ಫಲಾನುಭವಿಗಳಿಗೆ ಶಾಸಕರು ವಿತರಣೆ ಮಾಡಿದರು. ಗ್ರಾಮ ಪಂಚಾಯತ್‌ನ ಶೇಕಡಾ 25 ರ ನಿಧಿಯಲ್ಲಿ ಪ.ಜಾತಿ / ಪಂಗಡದ ಫಲಾನುಭವಿಗಳಿಗೆ ಸಹಾಯಧನವನ್ನು ವಿತರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಖಾ ಸ್ವಾಗತಿಸಿ, ಗ್ರಾಮ ಆಡಳಿತ ಅಧಿಕಾರಿ ಪ್ರಶಾಂತ್ ವಂದಿಸಿದರು. ಸದಸ್ಯರಾದ ಸತೀಶ್ ಪೂಜಾರಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.



































































































error: Content is protected !!
Scroll to Top