ಕಾರ್ಕಳ : ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ರಿ. ಬೆಂಗಳೂರು ಇದರ ಕಾರ್ಕಳ ಹಾಗೂ ಕಾರ್ಕಳ ತಾಲೂಕು ಘಟಕದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಫೆ. 11ರಂದು ಸಂಜೆ 5 ಗಂಟೆಗೆ ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಜಿ. ಎಂ. ರಾಜಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾರ್ಕಳ-ಹೆಬ್ರಿ ಘಟಕದ ಅಧ್ಯಕ್ಷೆ ನಳಿನಿ ಎಸ್. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ವಿ. ಸುನಿಲ್ ಕುಮಾರ್, ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ, ಉದ್ಯಮಿ ಬೋಳ ಪ್ರಶಾಂತ್ ಕಾಮತ್, ಫೆಡರೇಷನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ ಅಸೋಸಿಯೆಷನ್ ಬೆಂಗಳೂರು ಇದರ ರಾಜ್ಯ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧ್ಯಕ್ಷೆ ಮಿತ್ರಪ್ರಭಾ ಹೆಗ್ಡೆ ಭಾಗವಹಿಸಲಿದ್ದಾರೆ. ರಾಜ್ಯ ಉಪಾಧ್ಯಕ್ಷ ಕೃಷ್ಣಪ್ಪ, ರಾಜ್ಯ ಕಾರ್ಯದರ್ಶಿ ವಸಂತ್ ಕುಮಾರ್, ರಾಜ್ಯ ಕೋಶಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಅಧ್ಯಕ್ಷ ಎಂ. ಎನ್. ಕೊಟ್ಟಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.































