ಮಂಗಳೂರು – ಮೂಡುಬಿದಿರೆ – ಕಾರ್ಕಳ ಸಾಗುವ ವಾಹನಗಳಿಗೆ ಬದಲಿ ಮಾರ್ಗಗಳಲ್ಲಿ ಸಂಚಾರಕ್ಕೆ ಸೂಚನೆ
ಮಂಗಳೂರು : ಬಜಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಫೆ. 12 ರಿಂದ ಮಾ. 13 ರವರೆಗೆ (30 ದಿನ) ಸಾರ್ವಜನಿಕರು ಬದಲಿ ರಸ್ತೆಗಳನ್ನು ಉಪಯೋಗಿಸಿ ಸಹಕರಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಬದಲಿ ರಸ್ತೆ
ಮೂಡಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುವಂತಹ ಲಾರಿಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಪಕ್ಷಿಕೆರೆ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಮುಲ್ಕಿ ಜಂಕ್ಷನ್ – ಸುರತ್ಕಲ್ ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು ಹಾಗೂ ಮಂಗಳೂರು ಕಡೆಯಿಂದ ಮೂಡಬಿದ್ರೆ ಕಡೆಗೆ ಸಂಚರಿಸುವ ಲಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುವುದು.

ಮೂಡಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಇತರ ಎಲ್ಲಾ ಲಘುವಾಹನಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಮೂರುಕಾವೇರಿ- ಕಟೀಲು-ಪೆರ್ಮುದೆ-ಬಜಪೆ- ಮೂಲಕ ಅಥವಾ ಪಕ್ಷಿಕೆರೆ ಕ್ರಾಸ್‌ನಲ್ಲಿ ಎಡಕ್ಕೆ ತಿರುಗಿ ಹಳೆಯಂಗಡಿ- ಸುರತ್ಕಲ್ ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು ಹಾಗೂ ಮಂಗಳೂರು ಕಡೆಯಿಂದ ಮೂಡಬಿದ್ರೆ ಕಡೆಗೆ ಸಂಚರಿಸುವ ಇತರ ಎಲ್ಲಾ ಲಘುವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುವುದು.
ಮೂಡಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ದಡ್ಡಿ ದೂಮಚೆಡವು ಕ್ರಾಸ್ ಬಳಿ ಬಲಕ್ಕೆ ತಿರುಗಿ – ಪುಮಾರ್ ಪದವು ಕ್ರಾಸ್ – ಮಂಜನ ಕಟ್ಟೆ ಕ್ರಾಸ್- ಅರ್ಜುನಕೋಡಿ-ಈಶ್ವರಕಟ್ಟೆ ಕ್ರಾಸ್ – ಮುಚ್ಚೂರು ಕ್ರಾಸ್ ಬಳಿ ಬಲಕ್ಕೆ ತಿರುಗಿ ಕೈಕಂಬ ಗುರುಪುರ ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು.
ಮಂಗಳೂರು ಕಡೆಯಿಂದ ಗುರುಪುರ-ಕೈಕಂಬ ಮೂಲಕ ಮೂಡಬಿದ್ರೆ ಕಡೆಗೆ ಹೋಗುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ಗಂಜಿಮಠದಿಂದ ಮುಂದೆ ಮುಚ್ಚೂರು ಕ್ರಾಸ್ ಬಳಿ ಎಡಕ್ಕೆ ತಿರುಗಿ ಈಶ್ವರಕಟ್ಟೆ ಕ್ರಾಸ್-ಅರ್ಜುನಕೋಡಿ – ಮಂಜನ ಕಟ್ಟೆ ಕ್ರಾಸ್ -ಪುಮಾರ್ ಪದವು ಕ್ರಾಸ್- ದಡ್ಡಿ ಕಲ್ಪನೆ ದೂಮಚೆಡವು ಕ್ರಾಸ್ ಬಳಿ ಎಡಕ್ಕೆ ಸಂಚರಿಸಿ ಮೂಡಬಿದ್ರೆ ಕಡೆಗೆ ಸಂಚರಿಸುವುದು.
ಮಂಗಳೂರು ಕಡೆಯಿಂದ ಮೂಡಬಿದ್ರೆ ಮೂಲಕ -ಕಾರ್ಕಳ ಕಡೆಗೆ ಸಂಚರಿಸುವ ಎಲ್ಲಾ ಲಾರಿಗಳು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್-ಮುಲ್ಕಿ-ಪಡುಬಿದ್ರೆಯಿಂದಾಗಿ ಕಾರ್ಕಳ ಕಡೆಗೆ ಸಂಚರಿಸುವುದು.

































